ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು

Last Updated 30 ಡಿಸೆಂಬರ್ 2022, 2:32 IST
ಅಕ್ಷರ ಗಾತ್ರ

ನವದೆಹಲಿ: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ.

ಕೆಲವರುಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.

ಸಮಾಧಾನವಾಗಿ ಮಾತಾಡಿ ಎಂದು ಒಬ್ಬ ವ್ಯಕ್ತಿ ಹೇಳಿದರೆ, ಮತ್ತೊಬ್ಬ ವ್ಯಕ್ತಿ ನಿಮ್ಮ ಕೈ ಕೆಳಗಿಳಿಸಿ ಎಂದು ಕೂಗುತ್ತಾನೆ. ಹೀಗೆ ಮಾತಿಗೆ ಮಾತುಸೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತದೆ. ಒಬ್ಬ ವ್ಯಕ್ತಿ ಕೋಪದಿಂದ ಮತ್ತೊಬ್ಬನ ಕಪಾಳಕ್ಕೆ ಹೊಡೆಯುತ್ತಾನೆ. ಬಳಿಕ ಅದೇ ವ್ಯಕ್ತಿ ಕನ್ನಡಕ ತೆಗೆದು ನಿರಂತರವಾಗಿ ಹೊಡೆಯುವುದನ್ನುದೃಶ್ಯದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ವ್ಯಕ್ತಿ ಕೈಗಳನ್ನು ಅಡ್ಡ ಇಟ್ಟು ಏಟಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ.

ಹಳೆಯ ಸ್ನೇಹಿತರು ವಿಮಾನದಲ್ಲಿ ಎದುರಾದಾಗ ಯಾವುದೋ ವಿಷಯದ ಕುರಿತಂತೆ ಮಾತಿನ ಚಕಮಕಿ ನಡೆದು ಸಂಘರ್ಷ ನಡೆದಿದೆ ಎಂದು ಹೇಳಲಾಗಿದೆ. ಬ್ಯಾಂಕಾಕ್‌ನಿಂದ ಕೋಲ್ಕತ್ತಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದ ಸಿಬ್ಬಂದಿ ಕೊನೆಗೂಜಗಳ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT