ಭಾನುವಾರ, ಮೇ 29, 2022
22 °C

‘ಅಳಿಯ’ನ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರ ಈ ಮೊದಲು ಇತ್ತು: ನಿರ್ಮಲಾ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಅಳಿಯನ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರ ಈ ಹಿಂದೆ ಇತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂಥದ್ದನ್ನು ಪ್ರೋತ್ಸಾಹಿಸುವುದಿಲ್ಲ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕಾಂಗ್ರೆಸ್‌ಗೆ ಶುಕ್ರವಾರ ತಿರುಗೇಟು ನೀಡಿದರು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಿಜೆಪಿಗೆ ಆಪ್ತರಾಗಿರುವ ಬಂಡವಾಳಶಾಹಿಗಳ ಪರವಾಗಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂಬ ಕಾಂಗ್ರೆಸ್‌ನ ಟೀಕೆಯನ್ನು ಅವರು ತೀವ್ರವಾಗಿ ಖಂಡಿಸಿದರು.

‘ಸರ್ಕಾರ ಬಡವರ ಪರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಕೋವಿಡ್‌ ಪಿಡುಗು ವ್ಯಾಪಿಸಿದ್ದ ಸಂಕಷ್ಟದ ಸಮಯದಲ್ಲಿಯೂ ಕೇಂದ್ರ ಸರ್ಕಾರ ಬಡವರಿಗೆ ನೆರವು ನೀಡಿದೆ. ಇವೆಲ್ಲ ವಿರೋಧ ಪಕ್ಷಗಳಿಗೆ ಕಾಣಿಸುವುದಿಲ್ಲ. ಸರ್ಕಾರದ ಬಗ್ಗೆ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುವುದರಲ್ಲಿಯೇ ಅವು ನಿರತವಾಗಿವೆ’ ಎಂದೂ ಹರಿಹಾಯ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು