ಶುಕ್ರವಾರ, ಏಪ್ರಿಲ್ 23, 2021
22 °C

ನರೇಗಾ ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಗರಿಷ್ಠ ವೆಚ್ಚ: ನಿರ್ಮಲಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಪ್ರಸಕ್ತ ಹಣಕಾಸು ವರ್ಷದಲ್ಲಿ ₹ 90,500 ಕೋಟಿ ವೆಚ್ಚ ಮಾಡಿದೆ. ಈ ಯೋಜನೆಯಡಿ ಈವರೆಗೆ ಮಾಡಿರುವ ಗರಿಷ್ಠ ವೆಚ್ಚ ಇದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಹೇಳಿದರು.

ರಾಜ್ಯಸಭೆಯಲ್ಲಿ ಬಜೆಟ್‌ ಮೇಲೆ ನಡೆದ ಚರ್ಚೆ ವೇಳೆ ಈ ವಿಷಯ ತಿಳಿಸಿದ ಅವರು , ಕಾಂಗ್ರೆಸ್‌ ತನ್ನ ಅಧಿಕಾರಾವಧಿಯಲ್ಲಿ ಈ ಯೋಜನೆಯಡಿ ತೆಗೆದಿರಿಸಲಾಗಿದ್ದ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಗಿತ್ತು ಎಂದರು.

ಕೋವಿಡ್‌–19 ಪಿಡುಗು ಪ್ರಸರಣವಾಗುತ್ತಿದ್ದ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗಾಗಿ ನರೇಗಾ ಅಡಿ ₹ 90,469 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2020–21ನೇ ಸಾಲಿನಲ್ಲಿ ಈ ಯೋಜನೆಗೆ ಬಜೆಟ್‌ನಲ್ಲಿ ₹ 61,500 ಕೋಟಿ ಹಂಚಿಕೆ ಮಾಡಲಾಗಿತ್ತು. ಈ ಮೊತ್ತ ಪರಿಷ್ಕರಣೆಗೊಂಡ ನಂತರ ಅಂದಾಜು ವೆಚ್ಚ ₹ 1,11,500 ಕೋಟಿಗೇರಿತು ಎಂದೂ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು