ದೆಹಲಿ ಹಿಂಸಾಚಾರ: ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧವೂ ಎಫ್‌ಐಆರ್
ನವದೆಹಲಿ: ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ 22 ಎಫ್‌ಐಆರ್ ದಾಖಲಿಸಲಾಗಿದ್ದು 200 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಓದಿ: ರೈತ ಒಕ್ಕೂಟದಲ್ಲಿ ಒಡಕು: ಪ್ರತಿಭಟನೆಯಿಂದ ಹಿಂದೆ ಸರಿದ ಎರಡು ಸಂಘಟನೆಗಳು
ಈ ಕುರಿತು ಪ್ರತಿಕ್ರಿಯಿಸಿರುವ ಟಿಕಾಯತ್, ರೈತನೊಬ್ಬನ ಮೇಲೆ ಎಫ್‌ಐಆರ್ ದಾಖಲಿಸುವುದೆಂದರೆ ದೇಶದ ರೈತರ ಮೇಲೆ ಎಫ್‌ಐಆರ್ ದಾಖಲಿಸಿದಂತೆ ಎಂದು ಹೇಳಿದ್ದಾರೆ.
ಈ ಮಧ್ಯೆ, ಟ್ರ್ಯಾಕ್ಟರ್ ಪೆರೇಡ್ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ರಾಜಕೀಯ ಆರೋಪ ಪ್ರತ್ಯಾರೋಪಗಳೂ ಹೆಚ್ಚಾಗಿವೆ. ಗಲಭೆಗೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಸಂಸದ ಸುರೇಂದ್ರ ಸಿಂಗ್ ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಸಹ ತಿರುಗೇಟು ನೀಡಿದೆ. ಸದ್ಯದ ಪರಿಸ್ಥಿತಿಗೆ ಬಿಜೆಪಿಯೇ ನೇರ ಹೊಣೆ ಎಂದು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಟೀಕಿಸಿದ್ದಾರೆ. ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಹಿಂಸಾಚಾರ ನಡೆದದ್ದು ದುರದೃಷ್ಟಕರ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.
ಓದಿ: ಟ್ರ್ಯಾಕ್ಟರ್ ಚಾಲಕರು ಅವಿದ್ಯಾವಂತರು, ದೆಹಲಿ ಮಾರ್ಗ ಗೊತ್ತಿರಲಿಲ್ಲ: ಟಿಕಾಯತ್
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.