ಶುಕ್ರವಾರ, ಮಾರ್ಚ್ 31, 2023
22 °C

ತುರ್ತುನಿರ್ಗಮನ ರಕ್ಷಾಕವಚ ತೆರೆಯಲು ಯತ್ನಿಸಿದ ಪ್ರಯಾಣಿಕ, ಎಫ್‌ಐಆರ್‌ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನಾಗ್ಪುರದಿಂದ ಮುಂಬೈಗೆ ಇಂಡಿಗೊ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನವು ಇಳಿಯುವ ವೇಳೆ ತುರ್ತು ನಿರ್ಗಮನದ ರಕ್ಷಾಕವಚವನ್ನು ತೆರೆಯಲು ಪ್ರಯತ್ನಿಸಿದರು ಎಂದು ವಿಮಾನಯಾನ ಸಂಸ್ಥೆ ಭಾನುವಾರ ಹೇಳಿದೆ.

‘ರಕ್ಷಾಕವಚ ತೆರೆಯಲು ಪ್ರಯತ್ನಿಸಿದ ಪ್ರಯಾಣಿಕನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಇಂಡಿಗೊ ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರಯಾಣಿಕನ ನಡೆ ಗಮನಿಸಿದ ವಿಮಾನದ ಸಿಬ್ಬಂದಿ ಕಾಪ್ಟನ್‌ನನ್ನು ಎಚ್ಚರಿಸಿದ್ದಾರೆ. ಈ ಕುರಿತು ಉಳಿದ ಪ್ರಯಾಣಿಕರಿಗೂ ಎಚ್ಚರಿಕೆ ನೀಡಲಾಗಿದೆ’ ಎಂದು ತಿಳಿಸಿರುವ ಇಂಡಿಗೊ, ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು