ಭಾನುವಾರ, ಅಕ್ಟೋಬರ್ 25, 2020
23 °C

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ 200 ಜನರ ವಿರುದ್ಧ ಎಫ್‌ಐಆರ್

ಪಿಟಿಐ Updated:

ಅಕ್ಷರ ಗಾತ್ರ : | |

ನೋಯ್ಡಾ: ಅಂತರ ಕಾಯ್ದುಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ಹೇಳಿದ್ದಾರೆ.

ಎಫ್‌ಐಆರ್ ಅನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 188 (ಸಾರ್ವಜನಿಕ ಸೇವಕರಾಗಿದ್ದುಕೊಂಡು ಆದೇಶ ಪಾಲನೆ ಮಾಡದಿರುವುದು), 269 (ಕಾನೂನುಬಾಹಿರ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ಯಾವುದೇ ರೋಗದ ಸೋಂಕನ್ನು ಹರಡುವುದು), 270 (ಜೀವಕ್ಕೆ ಅಪಾಯಕಾರಿ ರೋಗದ ಸೋಂಕನ್ನು ಹರಡುವ ಸಾಧ್ಯತೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಪಕ್ಷದ ಕೆಲವು ಕಾರ್ಯಕರ್ತರು ಹಲ್ಲೆ ನಡೆಸಿದ ಕಾರಣ ಮಹಿಳಾ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ. ಅಲ್ಲದೆ ಮಹಿಳಾ ಸಬ್ ಇನ್ಸ್‌ಪೆಕ್ಟರ್‌ನ ಸಮವಸ್ತ್ರ ಹರಿದುಹೋಗಿದೆ' ಎಂದು ಗೌತಮ್ ಬುದ್ಧ ನಗರದ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಹಿಂದಿನ ದಿನ, ಇದಕ್ಕೂ ಮುನ್ನ ಪಕ್ಷದ ಹಿರಿಯ ನಾಯಕರು ಸೇರಿದಂತೆ ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರು ಪಾರಿ ಚೌಕದ ಬಳಿ ಬೆಂಗಾವಲು ವಾಹನಗಳನ್ನು ನಿಲ್ಲಿಸಿದ ನಂತರ, ಗ್ರೇಟರ್ ನೋಯ್ಡಾದ ಎಕ್ಸ್‌ಪ್ರೆಸ್‌ ವೇಗಳಲ್ಲಿ ಮೆರವಣಿಗೆ ಆರಂಭಿಸಿದ್ದರು. ಬಳಿಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 150 ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ್ದ ಪೊಲೀಸರು ಬಳಿಕ ವೈಯಕ್ತಿಕ ಬಾಂಡ್‌ನ ಮೇಲೆ ಬಿಡುಗಡೆ ಮಾಡಿದರು ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹಾಥರಸ್‌ ಎಂಬ ಗ್ರಾಮದಲ್ಲಿ 15 ದಿನಗಳ ಹಿಂದಷ್ಟೇ ಅತ್ಯಾಚಾರ ಎಸಗಿ ಹಲ್ಲೆ ನಡೆಸಲಾಗಿದ್ದ 19 ವರ್ಷದ ಯುವತಿಯು ಮಂಗಳವಾರ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ನಂತರ ದಲಿತ ಮಹಿಳೆಯ ಕುಟುಂಬವನ್ನು ಭೇಟಿಯಾಗಲು ಪಕ್ಷದ ಕಾರ್ಯಕರ್ತರು ಆಕಡೆಗೆ ತೆರಳುತ್ತಿದ್ದರು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು