ಯೂಟ್ಯೂಬ್ ಸಿನಿಮಾ ಪೈರಸಿ ಪ್ರಕರಣ: ಗೂಗಲ್ ಸಿಇಒ ಸುಂದರ್ ಪಿಚೈ ವಿರುದ್ಧ ಎಫ್‌ಐಆರ್

ಬೆಂಗಳೂರು: ಅನುಮತಿಯಿಲ್ಲದೇ ಸಿನಿಮಾ ಪ್ರಸಾರ ಮಾಡಿರುವ ಮತ್ತು ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ನಿರ್ದೇಶಕ ಸುನೀಲ್ ದರ್ಶನ್ ಅವರು ತಮ್ಮ ಚಿತ್ರ ‘ಏಕ್ ಹಸೀನಾ ಥಿ ಏಕ್ ದೀವಾನಾ ಥಾ‘ ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅನುಮತಿಯಿಲ್ಲದೆ ಪ್ರಸಾರ ಮಾಡಲಾಗಿದೆ ಮತ್ತು ಕಾಪಿರೈಟ್ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ದೂರು ನೀಡಿದ್ದಾರೆ.
ತಮ್ಮ ಸಿನಿಮಾವನ್ನು ಯಾರಿಗೂ ಮಾರಾಟ ಮಾಡಿಲ್ಲ, ಆದರೂ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಲಕ್ಷಾಂತರ ವೀಕ್ಷಣೆ ಬಂದಿದೆ ಎಂದು ದರ್ಶನ್ ಹೇಳಿದ್ದಾರೆ.
ಟಿಸಿಎಸ್ ಜಗತ್ತಿನ ಎರಡನೇ ಅತ್ಯಂತ ಮೌಲ್ಯಯುತ ಬ್ರ್ಯಾಂಡ್: ವರದಿ
ಅಕ್ರಮವಾಗಿ ಯೂಟ್ಯೂಬ್‌ಗೆ ಹಲವು ಸಿನಿಮಾ ಅಪ್‌ಲೋಡ್ ಮಾಡಿರುವ ಬಗ್ಗೆ ಈ ಹಿಂದೆಯೂ ಹಲವು ದೂರು ನೀಡಲಾಗಿತ್ತು. ಆದರೆ ಕಂಪನಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದರ್ಶನ್ ಆರೋಪಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.