ಬುಧವಾರ, ಸೆಪ್ಟೆಂಬರ್ 22, 2021
22 °C

ಸುಶಾಂತ್‌ ಸೋದರಿ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಕಾನೂನುಬಾಹಿರ: ವಿಕಾಸ್‌ ಸಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ದೂರಿನ ಮೇರೆಗೆ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಸಹೋದರಿ ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಕಾನೂನುಬಾಹಿರವಾಗಿದೆ ಎಂದು ಸುಶಾಂತ್‌ ತಂದೆ ಪರ ವಕೀಲ ವಿಕಾಸ್‌ ಸಿಂಗ್‌ ಅವರು ಮಂಗಳವಾರ ಆರೋಪಿಸಿದ್ದಾರೆ.

ರಜಪೂತ್‌ ಸಹೋದರಿ ಪ್ರಿಯಾಂಕಾ ಸಿಂಗ್‌ ಮತ್ತು ದೆಹಲಿ ಮೂಲದ ವೈದ್ಯರು ಖಿನ್ನತೆಗೆ ಸಂಬಂಧಿಸಿದ ನಕಲಿ ಪ್ರಿಸ್ಕ್ರಿಪ್ಶನ್ ಸೂಚಿಸಿದ್ದಾರೆ ಎಂದು ಆರೋಪಿಸಿ ರಿಯಾ ಚಕ್ರವರ್ತಿ ಬಾದ್ರಾ ಪೊಲೀಸ್‌ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದರು.

‘ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ‍ಪ್ರಕರಣವನ್ನು ಸಿಬಿಐ, ಇಡಿ ಮತ್ತು ಎನ್‌ಸಿಬಿ ತನಿಖೆ ನಡೆಸುತ್ತಿದೆ. ಹೀಗಿರುವಾಗ ತನಿಖೆಯ ದಾರಿ ತಪ್ಪಿಸಲು ಆರೋಪಿ ಈ ರೀತಿಯ ದೂರುಗಳನ್ನು ನೀಡಿದ್ದಾರೆ. ರಿಯಾ ಚಕ್ರವರ್ತಿ ದೂರಿನ ರದ್ದತಿ ಕೋರಿ ನ್ಯಾಯಲದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ವಿಕಾಸ್‌ ಅವರು ತಿಳಿಸಿದರು.

‘ಬಾದ್ರಾ ಪೊಲೀಸ್‌ ಠಾಣೆಯು ರಿಯಾ ಚಕ್ರವರ್ತಿಯ ಎರಡನೇ ಮನೆಯಾಗಿದೆ. ಪ್ರಿಯಾಂಕಾ ಸಿಂಗ್‌ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಕಾನೂನು ಬಾಹಿರ ಮತ್ತು ಸುಪ್ರೀಂಕೋರ್ಟಿನ ಆದೇಶದ ಉಲ್ಲಂಘನೆಯಾಗಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಮಾತ್ರ ದಾಖಲಿಸಬಹುದು. ಅಲ್ಲದೇ ವೈದ್ಯರ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮುನ್ನ ವೈದ್ಯಕೀಯ ತಂಡದೊಂದಿಗೆ ಚರ್ಚೆ ನಡೆಸಬೇಕು’ ಎಂದು ಸುಪ್ರೀಂಕೋರ್ಟ್‌ ಹೇಳಿತ್ತು ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು