ಬುಧವಾರ, ಮೇ 18, 2022
23 °C

ದೆಹಲಿ: ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ– ಎಫ್‌ಐಆರ್ ದಾಖಲು

ಐಎಎನ್ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಾಯುವ್ಯ ಭಾಗದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಘಟನೆಗೆ ಸಂಬಂಧಿಸಿದಂತೆ ನಾವು ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ತನಿಖೆ ಕೈಗೊಳ್ಳಲಾಗಿದೆ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಕಮಿಷನರ್ ದೀಪೇಂದ್ರ ಪಥಾಕ್ ಸುದ್ದಿಸಂಸ್ಥೆ ಐಎಎನ್ಎಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: 

ಹನುಮ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಶೋಭಾ ಯಾತ್ರೆಯಲ್ಲಿ ಶನಿವಾರ ಸಂಜೆ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು.

ಘಟನೆ ನಡೆದ ಸ್ಥಳಕ್ಕೆ ಕೂಡಲೇ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅನ್ನು ಒದಗಿಸಲಾಗಿತ್ತು.

ಓದಿ... ಚೆನ್ನೈನಲ್ಲಿ ಕನ್ನಡದಲ್ಲೇ ಕೆಜಿಎಫ್ ಸಿನಿಮಾ ವೀಕ್ಷಿಸಿದ ರಜನಿಕಾಂತ್: ಹೇಳಿದ್ದೇನು?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು