ಸೋಮವಾರ, ನವೆಂಬರ್ 30, 2020
27 °C

ಅರ್ನಬ್ ವಿರುದ್ಧ ಹೊಸ ಎಫ್‌ಐಆರ್: ಮಹಿಳಾ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಆರೋಪ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಅರ್ನಬ್‌ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಹಿಳಾ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ.

ಪೊಲೀಸರ ತಂಡ ಬೆಳಿಗ್ಗೆ ಮುಂಬೈನಲ್ಲಿರುವ ಅರ್ನಬ್‌ ಅವರ ನಿವಾಸ ಪ್ರವೇಶಿಸಿದ್ದಾಗ ಈ ಘಟಕ ನಡೆದಿರುವುದಾಗಿ ವರದಿಯಾಗಿದೆ. ಮಹಾರಾಷ್ಟ್ರ ಪೊಲೀಸರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅರ್ನಬ್‌ ಸಹ ಆರೋಪಿಸಿದ್ದಾರೆ.

ಅರ್ನಬ್‌ ಮತ್ತು ಅವರ ಕುಟುಂಬದ ಕೆಲವು ಸದಸ್ಯರ ಮೇಲೂ ಮುಂಬೈನ ಎನ್‌.ಎಂ.ಜೋಶಿ ಮಾರ್ಗ್‌ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 353, 504 ಮತ್ತು 506 ಹಾಗೂ ಸಾರ್ವಜನಿಕ ಆಸ್ತಿ ಹಾನಿ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

2018ರಲ್ಲಿ ಒಳಾಂಗಣ ವಿನ್ಯಾಸಗಾರ ಅನ್ವಯ್‌ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.

ಬಂಧನದ ಬಳಿಕ ಮುಂಬೈ ಕೋರ್ಟ್‌ನಲ್ಲಿ ಅರ್ನಬ್‌ ಅವರನ್ನು ಹಾಜರಿ ಪಡಿಸಲಾಯಿತು. ಅವರ ಮೇಲೆ ಪೊಲೀಸ್‌ ಅಧಿಕಾರಿಗಳಿಬ್ಬರು ಹಲ್ಲೆ ಮಾಡಿರುವುದಾಗಿ ಅರ್ನಬ್‌ ಪರ ವಕೀಲ ಆರೋಪಿಸಿದರು.

ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಕೇಂದ್ರ ಸರ್ಕಾರದ ಬಿಜೆಪಿ ಮುಖಂಡರು, ಸಚಿವರು ವಿರೋಧಿಸಿದ್ದು, ಮಹಾರಾಷ್ಟ್ರ ಸರ್ಕಾರ ಅಧಿಕಾರದ ದುರುಪಯೋಗ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಅನ್ವಯ್ ನಾಯಕ್‌ ಅವರ ಪತ್ನಿ ಅಕ್ಷಿತಾ ನಾಯಕ್‌, 'ಇಂಥದ್ದೊಂದು  ದಿನವನ್ನು ನನ್ನ ಜೀವನದಲ್ಲಿ ತಂದಿದ್ದಕ್ಕೆ ಮಹಾರಾಷ್ಟ್ರ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು