ಗುರುವಾರ , ಅಕ್ಟೋಬರ್ 1, 2020
21 °C

ಗುಜರಾತ್‌: ಕೋವಿಡ್‌ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ತಪ್ಪಿದ ಅಪಾಯ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Prajavani

ಬೊಡೆಲಿ: ಗುಜರಾತ್‌ನ ಚೋಟಾ ಉದಯಪುರ ಜಿಲ್ಲೆಯ ಬೊಡೆಲಿ ಪಟ್ಟಣದಲ್ಲಿ ಎರಡು ಅಂತಸ್ತಿನ ಆಸ್ಪತ್ರೆಯ ಕೋವಿಡ್‌–19 ವಾರ್ಡ್‌ನಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ.

ಅದೃಷ್ಟವಶಾತ್‌ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಈ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರನ್ನು ಕೂಡಲೇ ಆಸ್ಪತ್ರೆಯ ಕೆಳಮಹಡಿಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಕೆಲವರನ್ನು ಇತರ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಆಸ್ಪತ್ರೆಯ ಅಧಿಕಾರಿ ಹೇಳಿದ್ದಾರೆ.

ಶಾರ್ಟ್ ಸರ್ಕಿಟ್‌ನಿಂದಾಗಿ ವಾರ್ಡ್‌ನ ಸ್ವಿಚ್‌ ಬೋರ್ಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು ಆಸ್ಪತ್ರೆಯ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ಮುಖ್ಯ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮಹೇಶ್‌ ಚೌಧರಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು