ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಲ್ಲಿ ಬೆಂಕಿ: ಆಮ್ಲಜನಕ ಕೊರತೆಯಿಂದ ರೋಗಿ ಸಾವು

Last Updated 11 ಜೂನ್ 2022, 14:05 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೆಹಲಿಯ ರೋಹಿಣಿ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಶನಿವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ವ್ಯತ್ಯಯದಿಂದ ಉಂಟಾದ ಆಮ್ಲಜನಕ ಕೊರತೆಯಿಂದ 64 ವರ್ಷದ ರೋಗಿ ಮೃತಪಟ್ಟಿದ್ದಾರೆ.

ಬ್ರಹ್ಮ ಶಕ್ತಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಳಿಗ್ಗೆ 5 ಗಂಟೆಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ, ಅಗ್ನಿ ಶಾಮಕ ಸಿಬ್ಬಂದಿ ಕರೆಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಒಬ್ಬ ರೋಗಿ ಹೊರತುಪಡಿಸಿ ಇತರೆ ಎಲ್ಲಾ ರೋಗಿಗಳನ್ನು ರಕ್ಷಿಸಲಾಗಿದೆ ಎಂದು ಡಿಸಿಪಿ ಪ್ರಣವ್‌ ತಯಾಳ್ ತಿಳಿಸಿದರು.

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿ ಹೋಳಿ ಎಂಬುವರನ್ನು ರಕ್ಷಿಸಲಾಯಿತು. ಆದರೆ ಅವರು ಆಮ್ಲಜನಕ ಕೊರತೆಯಿಂದ ಮೃತಪಟ್ಟರು. ವಿವಿಧ ಸೆಕ್ಷನ್‌ ಅಡಿ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT