ನವದೆಹಲಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿರುವ ಸ್ಫೋಟ ದುರಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕಾಗಿ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿಯನ್ನು ಘೋಷಿಸಿದ್ದಾರೆ.
ಈ ಕುರಿತು ಪ್ರಧಾನ ಮಂತ್ರಿಗಳ ಕಚೇರಿಯು ಟ್ವೀಟ್ ಮಾಡಿದೆ.
ತಮಿಳುನಾಡಿನ ವಿರುಧುನಗರದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಘಟನೆಯು ಅತೀವ ದುಃಖಕರವಾಗಿದೆ. ದುಃಖತಪ್ತ ಕುಟುಂಬದವರೊಂದಿಗೆ ನಾನು ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ನೆರವು ಮಾಡಲು ಅಧಿಕಾರಿಗಳು ಪರಿಶ್ರಮ ವಹಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿಕೆಯನ್ನು ಟ್ವೀಟ್ ಮಾಡಿದೆ.
ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪಟಾಕಿ ಕಾರ್ಖಾನೆ ಬೆಂಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ಎರಡು ಲಕ್ಷ ರೂ.ಗಳನ್ನು ಘೋಷಿಸಲಾಗಿದೆ. ಹಾಗೆಯೇ ಗಂಭೀರ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.