ಭಾನುವಾರ, ಜೂನ್ 26, 2022
29 °C
ಯಾವುದೇ ಸಾವು–ನೋವು ಸಂಭವಿಸಿಲ್ಲ: ಅಧಿಕಾರಿಗಳು

ಕೋಲ್ಕತ್ತ: ಟಿಎಂಸಿ ಶಾಸಕ ಮದನ್ ಮಿತ್ರಾ ನಿವಾಸದಲ್ಲಿ ಅಗ್ನಿ ಅವಘಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ದಕ್ಷಿಣ ಕೋಲ್ಕತ್ತದ ಭವಾನಿಪುರ ಪ್ರದೇಶದಲ್ಲಿರುವ ತೃಣಮೂಲ ಕಾಂಗ್ರೆಸ್‌(ಟಿಎಂಸಿ) ಶಾಸಕ ಮದನ್ ಮಿತ್ರಾ ನಿವಾಸದಲ್ಲಿ ಮಂಗಳವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದೆ.

ಕೆಳ ಹಂತದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಶಾಸಕ ಮದನ್ ಮಿತ್ರ ತಮ್ಮ ಕುಟುಂಬದ ಸದಸ್ಯರೊಂದಿಗೆ ಮನೆಯಿಂದ ಹೊರಗಡೆ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

ಸುದ್ದಿ ತಿಳಿದ ಕೂಡಲೇ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ನಿಖರವಾದ ಕಾರಣ ತಿಳಿದಿಲ್ಲ. ‌ಆದರೆ, ಶಾರ್ಟ್ ಸರ್ಕಿಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ತನಿಖೆ ನಡೆಸಲಾಗುವುದು‘ ಎಂದು ಅಧಿಕಾರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು