ನವದೆಹಲಿ: ಸೊಳ್ಳೆ ಬತ್ತಿಯ ಕಿಡಿಯಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ವಿಷಕಾರಿ ಹೊಗೆಯಿಂದ ಉಸಿರುಗಟ್ಟಿ ಮಗು ಸೇರಿದಂತೆ ಆರು ಜನರು ಸಾವಿಗೀಡಾಗಿರುವ ದುರಂತ ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‌ನ ಮನೆಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಇನ್ನೂ ಮೂವರು ಮೃತಪಟ್ಟಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಶಾಸ್ತ್ರಿ ಪಾರ್ಕ್‌ನ ಮಚ್ಚಿ ಮಾರುಕಟ್ಟೆಯ ಮಜರ್ ವಾಲಾ ರಸ್ತೆಯ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 9 ಗಂಟೆಗೆ ಪೊಲೀಸರಿಗೆ ಮಾಹಿತಿ ಬಂದಿದೆ ಎಂದು ಡಿಸಿಪಿ ಜಾಯ್ ಟಿರ್ಕಿ ಹೇಳಿದ್ದಾರೆ.
ಪೊಲೀಸರು ಸ್ಥಳಕ್ಕೆ ತೆರಳುವ ಹೊತ್ತಿಗೆ 9 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪೈಕಿ ನಾಲ್ವರು ಪುರುಷರು, ಒಬ್ಬ ಮಹಿಳೆ, ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಗಾಯಗೊಂಡಿರುವ 15 ವರ್ಷದ ಬಾಲಕಿ, 45 ವರ್ಷದ ಮಹಿಳೆಗೆ ಚಿಕಿತ್ಸೆ ನಡೆಯುತ್ತಿದೆ.
ಪೊಲೀಸರ ಪ್ರಕಾರ, ರಾತ್ರಿ ಸೊಳ್ಳೆ ಓಡಿಸಲು ಹಚ್ಚಿದ್ದ ಸೊಳ್ಳೆ ಬತ್ತಿ ಹಾಸಿಗೆಯ ಮೇಲೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಷಕಾರಿ ಹೊಗೆಯಿಂದಾಗಿ ಮನೆಯ ಸದಸ್ಯರು ಪ್ರಜ್ಞೆ ಕಳೆದುಕೊಂಡಿದ್ದಾರೆ. ಬಳಿಕ, ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.