ಸೋಮವಾರ, ಏಪ್ರಿಲ್ 12, 2021
31 °C

ದೆಹಲಿಯ ದಿಲ್‌ಶಾದ್ ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ ಬೆಂಕಿ ಅವಘಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಇಲ್ಲಿನ ದಿಲ್‌ಶಾದ್ ಗಾರ್ಡನ್ ಕೈಗಾರಿಕಾ ಪ್ರದೇಶದಲ್ಲಿರುವ ನಾಲ್ಕು ಅಂತಸ್ತಿನ ಗೋದಾಮಿನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ’ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್‌ಎಸ್‌) ಅಧಿಕಾರಿಗಳು ತಿಳಿಸಿದರು.

‘ಬೆಳಿಗ್ಗೆ 8.30ಕ್ಕೆ ಬೆಂಕಿ ಅವಘಡದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ತಕ್ಷಣವೇ 15 ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಈ ಅವಘಡದಲ್ಲಿ ಪ್ರಾಣಹಾನಿ ಸಂಭವಿಸಿದ ಬಗ್ಗೆ ಈ ವರೆಗೆ ಮಾಹಿತಿ ಇಲ್ಲ’ ಎಂದು ಡಿಎಫ್‌ಎಸ್‌ನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಗೋದಾಮಿನ ಮೂರನೇ ಅಂತಸ್ತಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ’ ಎಂದು ಡಿಎಫ್‌ಎಸ್‌ ನಿರ್ದೇಶಕ ಅತುಲ್‌ ಗರ್ಗ್‌ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು