ಮಂಗಳವಾರ, ಏಪ್ರಿಲ್ 20, 2021
29 °C

ತೆಲಂಗಾಣ: ನಗರಕರ್ನೂಲ್‌ ಅರಣ್ಯದಲ್ಲಿ ಕಾಳ್ಗಿಚ್ಚು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನಗರಕರ್ನೂಲ್ (ತೆಲಂಗಾಣ):‌ ನಗರಕರ್ನೂಲ್‌ ಜಿಲ್ಲೆಯ ಡೊಮಲಪೆಂಟಾ ಹತ್ತಿರದ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಕಾಳ್ಗಿಚ್ಚು ಸಂಭವಿಸಿದೆ.

ಜಿಲ್ಲಾ ಅರಣ್ಯಾಧಿಕಾರಿ ಕೃಷ್ಣ ಗೌಡ್ ಅವರು ಈ ಸಂಬಂಧ ಮಾಹಿತಿ ನೀಡಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ʼಅರಣ್ಯಾಧಿಕಾರಿಗಳಿಗೆ ರಾತ್ರಿ 11.30ಕ್ಕೆ ವಿಚಾರ ತಿಳಿದ ಕೂಡಲೇ 10 ಅಗ್ನಿಶಾಮಕ ಸಿಬ್ಬಂದಿಯನ್ನೊಳಗೊಂಡ ಎರಡು ತಂಡ ಸ್ಥಳಕ್ಕೆ ಧಾವಿಸಿದವು. ಬೆಂಕಿ ನಂದಿಸುವ ಕಾರ್ಯ ತಡರಾತ್ರಿ 2.30 ರವರೆಗೂ ನಡೆಯಿತು. ಒಣ ಹುಲ್ಲಿನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನಷ್ಟ ಸಂಭವಿಸಿದೆʼ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು