ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಫ್ದರ್‌ಜಂಗ್‌ ಆಸ್ಪತ್ರೆಯಲ್ಲಿ ಬೆಂಕಿ; 50 ರೋಗಿಗಳು ಸ್ಥಳಾಂತರ

Last Updated 31 ಮಾರ್ಚ್ 2021, 6:06 IST
ಅಕ್ಷರ ಗಾತ್ರ

ನವದೆಹಲಿ: ‘ಇಲ್ಲಿನ ಸಫ್ದರ್‌ಜಂಗ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಲ್ಲಿಂದ 50 ರೋಗಿಗಳನ್ನು ಸ್ಥಳಾಂತರಿಸಲಾಗಿದೆ’ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದರು.

‘ಬೆಳಿಗ್ಗೆ 6.30ಕ್ಕೆ ಸುಮಾರಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಒಂಬತ್ತು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾದರು’ ಎಂದು ಅವರು ಹೇಳಿದರು.

‘ರೋಗಿಗಳನ್ನು ಬೇರೆ ವಾರ್ಡ್‌ಗೆ ಸ್ಥಳಾಂತರಿಸುವಲ್ಲಿ ಆಸ್ಪತ್ರೆಯ ಇತರ ಸಿಬ್ಬಂದಿ ಸಹ ಸಹಕಾರ ನೀಡಿದರು’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT