ಬುಧವಾರ, ಮಾರ್ಚ್ 29, 2023
28 °C

ಮುಂಬೈ: 15 ಮಹಡಿ ವಸತಿ ಸಮುಚ್ಛಯದಲ್ಲಿ ಬೆಂಕಿ, ವ್ಯಕ್ತಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರ ರಾಜಧಾನಿಯ ಕಾಂದಿವಲೀ ಉಪನಗರದ 15 ಮಹಡಿಯ ವಸತಿ ಸಮುಚ್ಛಯವೊಂದರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

14ನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ರಾತ್ರಿ 8.30ರ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಯಗೊಂಡ ಇಬ್ಬರನ್ನು ಶತಾಬ್ಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬರು ಆಸ್ಪತ್ರೆಗೆ ದಾಖಲಿಸುವುದಕ್ಕೂ ಮೊದಲೇ ಅಸುನೀಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಅಹ್ಮದ್‌ ನಗರದ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಶನಿವಾರ ಭಾರಿ ಪ್ರಮಾಣದ ಅಗ್ನಿ ಅನಾಹುತ ಸಂಭವಿಸಿ 11 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟ ಬೆನ್ನಲ್ಲೇ ಈ ಅನಾಹುತವೂ ಸಂಭವಿಸಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು