ಮಂಗಳೂರು-ತಿರುವನಂತಪುರ ಮಲಬಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಆಕಸ್ಮಿಕ

ತಿರುವನಂತಪುರ: ಮಂಗಳೂರಿನಿಂದ ತಿರುವನಂತಪುರಕ್ಕೆ ತೆರಳಿದ ಮಲಬಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾನುವಾರ ಬೆಂಕಿ ಆಕಸ್ಮಿಕ ಸಂಭವಿಸಿದೆ ಎಂದು ರೈಲ್ವೆ ಮೂಲಗಳಿಂದ ತಿಳಿದು ಬಂದಿರುವುದಾಗಿ ವರದಿಯಾಗಿದೆ.
ಮಂಗಳೂರು-ತಿರುವನಂತಪುರ ಮಲಬಾರ್ ಎಕ್ಸ್‌ಪ್ರೆಸ್ ರೈಲಿನ ಪಾರ್ಸೆಲ್ ವ್ಯಾನ್‌ನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದೆ. ಕೇರಳ ರಾಜಧಾನಿ ತಿರುವನಂತಪುರ ತಲುಪಲು 40 ಕೀ.ಮೀ.ಗಳಷ್ಟೇ ದೂರದಲ್ಲಿರುವಾಗ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಬಳಿಕ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ಇದನ್ನೂ ಓದಿ: ಏಕತಾ ಪ್ರತಿಮೆಗೆ ರೈಲ್ವೆ ಸಂಪರ್ಕ: ಎಂಟು ರೈಲಿಗೆ ಇಂದು ಮೋದಿ ಚಾಲನೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ವರ್ಕಲ ಹಾಗೂ ಪರವೂರ್ ನಿಲ್ದಾಣಗಳ ನಡುವಣ ಎಡವದಲ್ಲಿ ಬೆಳಗ್ಗೆ 7.40ರ ಸುಮಾರಿಗೆ ರೈಲಿನ ಮುಂಭಾಗದಲ್ಲಿರುವ ಪಾರ್ಸೆಲ್ ವ್ಯಾನ್‌ನಲ್ಲಿ ಹೊಗೆಯನ್ನು ಗಮನಿಸಿದ ಲೊಕೊ ಪೈಲಟ್ ತಕ್ಷಣ ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
Kerala: Luggage van of Malabar Express caught fire near Varkala in Thiruvananthapuram district today morning. No casualties reported. pic.twitter.com/QGhacx9FGh
— ANI (@ANI) January 17, 2021
ಪಾರ್ಸೆಲ್ ವ್ಯಾನ್‌ನಿಂದ ಬೆಂಕಿ ಇತರೆಡೆಗೆ ಹರಡದಂತೆ ತಡೆಯುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಬೆಂಕಿ ಹೊತ್ತಿಕೊಂಡಿರುವ ಘಟನೆಯ ಹಿಂದಿನ ನಿಖರ ಕಾರಣಗಳು ತಿಳಿದುಬಂದಿಲ್ಲ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.