ಮಂಗಳವಾರ, ಜುಲೈ 5, 2022
26 °C

ಕೋಲ್ಕತ್ತ: ಗೋದಾಮಿನಲ್ಲಿ ಅಗ್ನಿ ಅವಘಡ, 15 ತಾಸುಗಳ ಕಾರ್ಯಾಚರಣೆ ಬಳಿಕ ಹತೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ಟಾಂಗ್ರಾ ಪ್ರದೇಶದ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬರೋಬ್ಬರಿ 15 ತಾಸುಗಳ ಕಾರ್ಯಾಚರಣೆಯ ಬಳಿಕ ಹತೋಟಿಗೆ ಬಂದಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸಿಂಥೆಟಿಕ್ ಲೆದರ್ ಸಹಿತ ಹಲವು ಸರಕುಗಳನ್ನು ದಾಸ್ತಾನು ಇರಿಸಲಾಗಿದ್ದ ಗೋದಾಮಿಗೆ ಶನಿವಾರ ಸಂಜೆ ಬೆಂಕಿ ಬಿದ್ದಿತ್ತು. ಪಕ್ಕದ ಕಟ್ಟಡಕ್ಕೂ ಬೆಂಕಿ ಹರಡಿತ್ತು. ಬಳಿಕ 15 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಸ್ಥಳೀಯರು ಸಹ ಕಾರ್ಯಾಚರಣೆಗೆ ನೆರವಾಗಿದ್ದರು.

ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಗಾಯಗೊಂಡಿರುವ ಇಬ್ಬರು ಸಿಬ್ಬಂದಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

 

 

ಕಟ್ಟಡದಲ್ಲಿ ಈಗಲೂ ಸಣ್ಣ ಪ್ರಮಾಣದ ಬೆಂಕಿಯಿದ್ದು, ಕಾರ್ಯಾಚರಣೆ ಮುಂದುವರಿದಿದೆ.

 

ಗೋದಾಮಿನಲ್ಲಿ ಸಿಂಥೆಟಿಕ್ ಲೆದರ್ (ರೆಕ್ಸಿನ್), ರಾಸಾಯನಿಕ, ಕರ್ಪೂರದ ಎಣ್ಣೆ, ಮದ್ಯ ಇಡಲಾಗಿತ್ತು. ಇದು ಬೆಂಕಿಯ ತೀವ್ರತೆ ಹೆಚ್ಚಾಗಲು ಕಾರಣವಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು