ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಕೊಳೆಗೇರಿಯಲ್ಲಿ ಅಗ್ನಿ ಅವಘಡ– 12 ಮಂದಿಗೆ ಗಾಯ

Last Updated 20 ನವೆಂಬರ್ 2022, 12:45 IST
ಅಕ್ಷರ ಗಾತ್ರ

ಸಿಲಿಗುರಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಸಿಲಿಗುರಿ ನಗರದ ಕೊಳೆಗೇರಿಯೊಂದರಲ್ಲಿ ಶನಿವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, 12 ಜನರು ಗಾಯಗೊಂಡಿದ್ದಾರೆ, ಸುಮಾರು 50 ಮನೆಗಳು ಹಾನಿಗೀಡಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 2,000 ಜನರು ನೆಲೆಸಿರುವರಾಣಾ ಬಸ್ತಿ ಪ್ರದೇಶದಲ್ಲಿ ಶನಿವಾರ ರಾತ್ರಿ 8 ಗಂಟೆಗೆ ಬೆಂಕಿ ಹೊತ್ತುಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದರು. ಬೆಂಕಿಗೀಡಾದ ಮನೆಗಳ ನಿವಾಸಿಗಳನ್ನು ತಾತ್ಕಾಲಿಕ ವಸತಿಗಳಿಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಆಹಾರ ಮತ್ತು ವಸ್ತ್ರಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಗಾಯಗೊಂಡವರಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ, ಒಂದು ಮಗು ಸೇರಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಇತರರಿಗೆ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ. ಕೆಲ ಮನೆಗಳಲ್ಲಿ ಅನಿಲ ಸಿಲಿಂಡರ್‌ಗಳು ಸ್ಫೋಟಗೊಂಡವು. ಇದರಿಂದಾಗಿ ಬೆಂಕಿ ವೇಗವಾಗಿ ಹರಡಿತು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT