ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿ ಅವಘಡ ‘ದೇವರ ಆಟ‘ವಲ್ಲ: ‘ಸುಪ್ರೀಂ‘

Last Updated 8 ಜನವರಿ 2022, 19:30 IST
ಅಕ್ಷರ ಗಾತ್ರ

ನವದೆಹಲಿ: ಚಂಡಮಾರುತ, ಪ್ರವಾಹ, ಭೂಕಂಪನ ಅಥವಾ ಸಿಡಿಲಿನಂತಹ ನೈಸರ್ಗಿಕ ಪ್ರಕೋಪಗಳಿಂದಾಗಿ ಸಂಭವಿಸದ ಹೊರತು ಅಗ್ನಿ ಅವಘಡವನ್ನು ‘ದೇವರ ಆಟ’ ಎಂದು ಕರೆಯಲಾಗದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್, ದಿನೇಶ್‌ ಮಾಹೇಶ್ವರಿ ಹಾಗೂ ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠ ಅರ್ಜಿಯೊಂದರ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಮದ್ಯ ತಯಾರಿಸುವ ಕಂಪನಿಯೊಂದರ ಉಗ್ರಾಣದಲ್ಲಿ ಸಂಭವಿಸಿದ ಅಗ್ನಿ ಅವಘಡವನ್ನು ‘ದೇವರ ಆಟ’ ಎಂದು ಕರೆದಿದ್ದ ಅಲಹಾಬಾದ್‌ ಹೈಕೋರ್ಟ್‌, ತೆರಿಗೆ ಭರಿಸುವುದರಿಂದ ಕಂಪನಿಗೆ ವಿನಾಯಿತಿ ನೀಡಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶದ ಅಬಕಾರಿ ಇಲಾಖೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಹೈಕೋರ್ಟ್‌ನ ಈ ಆದೇಶವನ್ನು ರದ್ದು ಮಾಡಿದ ನ್ಯಾಯಪೀಠ, ಈ ಪ್ರಕರಣದಲ್ಲಿ ಚಂಡಮಾರುತ, ಪ್ರವಾಹ, ಸಿಡಿಲು ಅಥವಾ ಭೂಕಂಪನದಂತಹ ಪ್ರಕೃತಿ ವಿಕೋಪದಿಂದಾಗಿ ಅಗ್ನಿ ದುರಂತ ಸಂಭವಿಸಿಲ್ಲ ಎಂದು ಅಭಿಪ್ರಾಯಪಟ್ಟಿತು.

‘ಯಾವುದೇ ವ್ಯಕ್ತಿಯ ಕಿಡಿಗೇಡಿತನದಿಂದಾಗಿಯೂ ಉಗ್ರಾಣದಲ್ಲಿ ಅಗ್ನಿ ದುರಂತ ಸಂಭವಿಸಿಲ್ಲ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT