ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್ಪುರ | ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಅವಘಡ: 500 ಅಂಗಡಿಗಳು ಅಗ್ನಿಗಾಹುತಿ

Last Updated 31 ಮಾರ್ಚ್ 2023, 6:44 IST
ಅಕ್ಷರ ಗಾತ್ರ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಬಾಂಸ್‌ಮಂಡಿ ಪ್ರದೇಶದ ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ, ಕನಿಷ್ಠ 500 ಅಂಗಡಿಗಳು ಭಸ್ಮವಾಗಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಪಕ್ಕದ ಕಟ್ಟಗಳಿಗೂ ಬೆಂಕಿ ವ್ಯಾಪಿಸಿವೆ.

ಧೂಳಿನಿಂದ ಕೂಡಿದ ಬಿರುಗಾಳಿಯ ನಂತರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿ ಅವಘಡದಲ್ಲಿ ₹100 ಕೋಟಿಗೂ ಅಧಿಕ ಮೌಲ್ಯದ ಹೆಚ್ಚು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT