ದೆಹಲಿಯ ಪ್ರತಾಪ್ ನಗರದ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ವ್ಯಕ್ತಿ ಸಾವು

ನವದೆಹಲಿ: ಇಲ್ಲಿನ ಪ್ರತಾಪ್ ನಗರ ಪ್ರದೇಶದ ಕಾರ್ಖಾನೆಯೊಂದರಲ್ಲಿ ಶನಿವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮುಂಜಾನೆ 3.47ಕ್ಕೆ ಕರೆ ಬಂದಿದ್ದು, ತಕ್ಷಣವೇ 18 ಅಗ್ನಿಶಾಮಕ ವಾಹನಗಳನ್ನು ಕಳುಹಿಸಿಕೊಡಲಾಗಿದೆ. ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಓದಿ: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣ ಹೆಚ್ಚಳ ಸಾಧ್ಯತೆ: ವಿಜ್ಞಾನಿಗಳ ಎಚ್ಚರಿಕೆ
ಈ ಮಧ್ಯೆ, ಎಲ್‌ಪಿಜಿ ಸಿಲಿಂಡರ್ ಸೋರಿಕೆ ಅವಘಡಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.
Delhi: Fire breaks out at a factory in Pratap Nagar area. Fire tenders present at the spot. More details awaited. pic.twitter.com/R7ZvFXiOcM
— ANI (@ANI) February 27, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.