ಶನಿವಾರ, ಸೆಪ್ಟೆಂಬರ್ 18, 2021
26 °C

ಫಿರೋಜಾಬಾದ್: ಶಂಕಿತ ಡೆಂಗಿ, ವೈರಲ್ ಜ್ವರಕ್ಕೆ ಮಕ್ಕಳು ಸೇರಿದಂತೆ 41 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಕಳೆದ 10 ದಿನಗಳಲ್ಲಿ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರದಿಂದಾಗಿ ಮಕ್ಕಳು ಸೇರಿದಂತೆ 41 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದರಿಂದಾಗಿ ಫಿರೋಜಾಬಾದ್‌ನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮೃತಪಟ್ಟಿರುವುದು ಕಳವಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ಸರ್ಕಾರವು ಫಿರೋಜಾಬಾದ್‌ನ ವೈದ್ಯಾಧಿಕಾರಿಯನ್ನು ವರ್ಗಾವಣೆ ಮಾಡಿದೆ. ಅಲ್ಲದೆ ಡಾ. ದಿನೇಶ್ ಕುಮಾರ್ ಪ್ರೇಮಿ ಅವರನ್ನು ನೂತನ ವೈದ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಪರಿಸ್ಥಿತಿಯ ಅವಲೋಕನಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಂಡ ಫಿರೋಜಾಬಾದ್‌ಗೆ ತಲುಪಿದೆ.

ಆಗಸ್ಟ್ 22-23ರಿಂದ ಶಂಕಿತ ಡೆಂಗಿಯಿಂದಾಗಿ ಜಿಲ್ಲೆಯಲ್ಲಿ 44 ಮಂದಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಮನೀಷ್ ಅಸಿಜಾ ಹೇಳಿದ್ದರು. ಆದರೆ ಇದುವರೆಗೆ 56 ಮಂದಿ ಮೃತಪಟ್ಟಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದರು.

ಸೋಮವಾರದಂದು ಡೆಂಗಿ ರೋಗಿಗಳನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಗ್ಯ ವಿಚಾರಿಸಿದ್ದರು. ಅಲ್ಲದೆ ಸೂಕ್ತ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ತಂಡಕ್ಕೆ ಸೂಚನೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು