ಬುಧವಾರ, ಆಗಸ್ಟ್ 10, 2022
24 °C

ಕೋವಿಡ್‌ ಚಿಕಿತ್ಸೆಗೆ ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ 2–ಡಿಜಿ ಔಷಧ ಬಿಡುಗಡೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಕೋವಿಡ್‌ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಿರುವ 2–ಡಯಾಕ್ಸಿ–ಡಿ–ಗ್ಲೂಕೋಸ್‌ (2–ಡಿಜಿ) ಔಷಧದ ಮೊದಲ ಕಂತನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್‌ ಅವರು ಸೋಮವಾರ ಇಲ್ಲಿ ಬಿಡುಗಡೆ ಮಾಡಿದರು.

ಈ ಔಷಧದ ತುರ್ತು ಬಳಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಈ ತಿಂಗಳ ಆರಂಭದಲ್ಲೇ ಅನುಮೋದನೆ ನೀಡಿದ್ದರು.

ಕೋವಿಡ್‌ ರೋಗಿಗಳ ಚಿಕಿತ್ಸೆಯಲ್ಲಿ ಈ ಔಷಧ ಹೊಸ ಭರವಸೆ ಮೂಡಿಸಿದೆ. ರಾಷ್ಟ್ರದ ವೈಜ್ಞಾನಿಕ ಸಾಮರ್ಥ್ಯಕ್ಕೆ ಇದು ಬಹು ದೊಡ್ಡ ಉದಾಹರಣೆ ಎಂದು ರಾಜನಾಥ್‌ ಸಿಂಗ್‌ ಅವರು ಡಿಆರ್‌ಡಿಒ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

‘ನಾವೀಗ ನಿರಾಳವಾಗುವ ಅಗತ್ಯ ಇಲ್ಲ. ಏಕೆಂದರೆ ಕೊರೊನಾ  ಎರಡನೇ ಅಲೆ  ಬಂದಿದೆ. ಇದರ ಬಗ್ಗೆ ಏನನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಸಂಪೂರ್ಣ ಎಚ್ಚರಿಕೆಯಿಂದ ನಾವು ಕ್ರಮಗಳನ್ನು ಕೈಗೊಳ್ಳಬೇಕು‘ ಎಂದರು.

ಆಕ್ಸಿಜನ್‌ ಪೂರೈಕೆಯಾಗಲೀ ಅಥವಾ ಐಸಿಯು ಹಾಸಿಗೆ ಲಭ್ಯತೆಯಾಗಲೀ ಎಲ್ಲವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿವೃತ್ತ ವೈದ್ಯರು ಮತ್ತೆ ಕೆಲಸಕ್ಕೆ ಮರಳಿರುವುದು ಸಂತಸದ ವಿಚಾರ. ಇದು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬಲ್ಲದು ಎಂದರು.

ಹೈದರಾಬಾದ್‌ನ ಡಾ. ರೆಡ್ಡೀಸ್‌ ಲ್ಯಾಬ್‌ನ ಸಹಯೋಗದಲ್ಲಿ ಡಿಆರ್‌ಡಿಒದ ಇನ್‌ಸ್ಟಿಟ್ಯೂಟ್‌ ಆಫ್‌ ನ್ಯೂಕ್ಲಿಯರ್‌ ಮೆಡಿಸಿನ್‌ ಅಂಡ್ ಅಲೈಡ್ ಸೈನ್ಸಸ್‌ (ಐಎನ್‌ಎಂಎಎಸ್‌) ಪ್ರಯೋಗಾಲಯದಲ್ಲಿ 2–ಡಿಜಿ ಔಷಧವನ್ನು ಅಭಿವೃದ್ಧಿಪಡಿಸಲಾಗಿದೆ.

ಸಣ್ಣ ಪೊಟ್ಟಣದಲ್ಲಿ ಪುಡಿಯ ರೂಪದಲ್ಲಿರುವ ‘2–ಡಿಜಿ’ ಔಷಧವನ್ನು ನೀರಿನಲ್ಲಿ ಬೆರೆಸಿ ಸೇವಿಸಬೇಕು ಎಂದು ಸಚಿವಾಲಯ ಹೇಳಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು