ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರದಿಂದ ಮೊದಲ ತಂಡದಲ್ಲಿ 145 ಮಂದಿ ಹಜ್ ಯಾತ್ರೆಗೆ

Last Updated 5 ಜೂನ್ 2022, 7:50 IST
ಅಕ್ಷರ ಗಾತ್ರ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಿಂದ ಹಜ್‌ ಯಾತ್ರೆಯಲ್ಲಿ ಪಾಲ್ಗೊಳ್ಳಲು 145 ಯಾತ್ರಾರ್ಥಿಗಳ ಮೊದಲ ತಂಡ ಭಾನುವಾರ ಸೌದಿ ಅರೇಬಿಯಾಕ್ಕೆ ತೆರಳಿದೆ. ಕೋವಿಡ್‌–19ನಿಂದಾಗಿ ಕಳೆದ ಎರಡು ವರ್ಷಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಕೇಂದ್ರಾಡಳಿತ ಪ್ರದೇಶದಿಂದ 6 ಸಾವಿರ ಜನರನ್ನು ಯಾತ್ರೆಗೆ ಕರೆದೊಯ್ಯಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಎಲ್ಲ ಯಾತ್ರಾರ್ಥಿಗಳು ಕೋವಿಡ್‌–19 ನೆಗೆಟಿವ್‌ ವರದಿ ಹೊಂದಿದ್ದಾರೆ ಎಂದು ಮಾಹಿತಿ ನೀಡಿರುವಜಮ್ಮು ಮತ್ತು ಕಾಶ್ಮೀರ ಹಜ್‌ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್‌ ಸಲಾಂ ಮಿರ್‌,'ಯಾತ್ರಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದಿದ್ದಾರೆ.

ಹಜ್‌ ಸಮಿತಿ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ ಎಂದು ಭಾರತೀಯ ಹಜ್‌ ಸಮಿತಿ ಸದಸ್ಯ ಐಜಾಜ್‌ ಹುಸೇನ್‌ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು ಯಾತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ್ದರು.

ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಮತ್ತು ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶುಭಾಶಯ ಕೋರಿದ್ದಾರೆ.

ಶ್ರೀನಗರ ವಿಮಾನ ನಿಲ್ದಾಣದಿಂದ ಜೆಡ್ಡಾ ವಿಮಾನ ನಿಲ್ದಾಣಕ್ಕೆ ಮೊದಲ ಐದು ದಿನಗಳವರೆಗೆ ಒಂದು ಹಾಗೂ ನಂತರ ಎರಡು ವಿಮಾನಗಳು ಕಾರ್ಯನಿರ್ವಹಿಸಲಿವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT