ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಗೆ ಆಗಮಿಸಿದ ಕೊವ್ಯಾಕ್ಸಿನ್ ಲಸಿಕೆ

Last Updated 13 ಜನವರಿ 2021, 5:48 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಔಷಧ ನಿಯಂತ್ರಕ ಅನುಮೋದನೆ ನೀಡಿದ್ದ ಎರಡು ಲಸಿಕೆಗಳ ಪೈಕಿ ಒಂದಾದ ಕೊವ್ಯಾಕ್ಸಿನ್ ಲಸಿಕೆಯ ಮೊದಲ ಸರಕು ಇಂದು ದೆಹಲಿಗೆ ಆಗಮಿಸಿದೆ.

ಅತಿ ದೊಡ್ಡ ಲಸಿಕೆ ಉತ್ಪಾದನಾ ಸ್ವದೇಶಿ ಕಂಪನಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯ ಮೊದಲ ಸರಕು ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದೆ. ಬಳಿಕ ಮೂರು ಪೆಟ್ಟಿಗೆಗಳನ್ನು ಹರಿಯಾಣಗೆ ಕೊಂಡೊಯ್ಯಲಾಗಿದೆ.

ನಿನ್ನೆಯಷ್ಟೇ ಸೀರಮ್ ಇನ್‌ಸ್ಟಿಟ್ಯೂಟ್‌ನ ಕೊವಿಶೀಲ್ಡ್ ಲಸಿಕೆಗಳು ದೇಶದ ವಿವಿಧ ಭಾಗಗಳಿಗೆ ರವಾನೆಯಾಗಿದ್ದವು. ಇದರ ಬೆನ್ನಲ್ಲೇ ಕೊವ್ಯಾಕ್ಸಿನ್ ಲಸಿಕೆಯ ಸರಬರಾಜು ಸಹ ಆರಂಭವಾಗಿದೆ. ಹೈದರಾಬಾದ್‌ನ ಭಾರತ್ ಬಯೋಟೆಕ್‌ನ ಕೊರೊನಾ ವೈರಸ್ ಲಸಿಕೆ ಕೊವಾಕ್ಸಿನ್‌ನ ಮೊದಲ ಹಂತದಲ್ಲಿ ಇಂದು ದೆಹಲಿಗೆ ತಲುಪಿದೆ.

ದೆಹಲಿ ಜೊತೆಗೆ ಲಸಿಕೆಗಳನ್ನು ಬೆಂಗಳೂರು, ಚೆನ್ನೈ, ಪಾಟ್ನಾ, ಜೈಪುರ ಮತ್ತು ಲಕ್ನೋಗೆ ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಇಂದು ಕಾರ್ಖಾನೆಯಿಂದ ಇನ್ನೂ 14 ಕಡೆಗಳಿಗೆ ಲಸಿಕೆ ಸಾಗಣೆ ನಡೆಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿರುವುದಾಗಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT