ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆ

Last Updated 8 ಜುಲೈ 2021, 17:18 IST
ಅಕ್ಷರ ಗಾತ್ರ

ತಿರುವನಂತಪುರ: ಕೋವಿಡ್ ಜೊತೆಗೆ ಈಗ ಝಿಕಾ ವೈರಸ್‌ನ ಆತಂಕ ಶುರುವಾಗಿದೆ. ಕೇರಳದಲ್ಲಿ ಝಿಕಾ ವೈರಸ್‌ನ ಮೊದಲ ಪ್ರಕರಣ ಪತ್ತೆಯಾಗಿದ್ದು, 24 ವರ್ಷದ ಗರ್ಭಿಣಿಗೆ ಸೊಳ್ಳೆಯಿಂದ ಹರಡುವ ಈ ಕಾಯಿಲೆ ಇರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ತಿಳಿಸಿದ್ದಾರೆ.

ತಿರುವನಂತಪುರಂನಲ್ಲಿ ಇನ್ನೂ 13 ಶಂಕಿತ ಪ್ರಕರಣಗಳಿವೆ ಎಂದು ಸಚಿವರು ಪಿಟಿಐಗೆ ತಿಳಿಸಿದ್ದಾರೆ. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ)ಯಿಂದ ದೃಢೀಕರಣಕ್ಕಾಗಿಸರ್ಕಾರವು ಕಾಯುತ್ತಿದೆ.

ತಿರುವನಂತಪುರಂನಿಂದ ಕಳುಹಿಸಲಾದ 19 ಮಾದರಿಗಳಲ್ಲಿ, ವೈದ್ಯರು ಸೇರಿದಂತೆ 13 ಆರೋಗ್ಯ ಕಾರ್ಯಕರ್ತರಿಗೆ ಝಿಕಾ ಸೋಂಕು ತಗುಲಿರಬಹುದೆಂದು ಶಂಕಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಝಿಕಾ ಸೋಂಕಿತ ಮಹಿಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜುಲೈ 7 ರಂದು ಮಗುವಿಗೆ ಜನ್ಮ ನೀಡಿದ್ದಾರೆ.

ಜ್ವರ, ತಲೆನೋವು ಮತ್ತು ದೇಹದ ಮೇಲೆ ಕೆಂಪು ಮಚ್ಚೆ ಮೂಡಿದ್ದರಿಂದ ಜೂನ್ 28 ರಂದು ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು.

ಆಸ್ಪತ್ರೆಯಲ್ಲಿ ನಡೆದ ಪರೀಕ್ಷೆಯಲ್ಲಿ ಆಕೆಗೆ ಝಿಕಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪ್ರಯೋಗಾಲಯ ಮಾದರಿಗಳನ್ನು ಪುಣೆಯ ಎನ್‌ಐವಿಗೆ ಕಳುಹಿಸಲಾಗಿದೆ.

ಸದ್ಯ, ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಹೊರ ರಾಜ್ಯಕ್ಕೆ ಪ್ರಯಾಣ ಮಾಡಿದ ಇತಿಹಾಸವಿಲ್ಲದಿದ್ದರೂ, ಆಕೆಯ ಮನೆ ತಮಿಳುನಾಡು ಗಡಿಯಲ್ಲಿದೆ. ಒಂದು ವಾರದ ಹಿಂದೆ, ಆಕೆಯ ತಾಯಿಗೂ ಸಹ ಇದೇ ರೀತಿಯ ರೋಗಲಕ್ಷಣ ಕಂಡುಬಂದಿತ್ತು ಎಂದು ಪ್ರಕಟಣೆ ತಿಳಿಸಿದೆ.

ಝಿಕಾ ರೋಗಲಕ್ಷಣಗಳಾದ ಜ್ವರ, ಚರ್ಮದ ದದ್ದುಗಳು ಮತ್ತು ಕೀಲು ನೋವು ಡೆಂಗ್ಯೂ ರೋಗಲಕ್ಷಣಗಳನ್ನೇ ಹೋಲುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT