ಶುಕ್ರವಾರ, ಡಿಸೆಂಬರ್ 3, 2021
20 °C

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ಪತ್ತೆ, ಆತಂಕ

ಪಿಟಿಐ Updated:

ಅಕ್ಷರ ಗಾತ್ರ : | |

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಾರಂಟ್ ಅಧಿಕಾರಿಯೊಬ್ಬರಿಗೆ ಶನಿವಾರ ಸೋಂಕು ಇರುವುದು ಪತ್ತೆಯಾಯಿತು. ಇದು ಕಾನ್ಪುರದಲ್ಲಿ ಪತ್ತೆಯಾಗಿರುವ ಮೊದಲನೆ ಪ್ರಕರಣ ಎಂದು ಅವರು ಹೇಳಿದರು.

ಐಎಎಫ್ ಅಧಿಕಾರಿ ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಜಿಲ್ಲೆಯ ವಾಯುಪಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಕರಣದಲ್ಲಿನ ನಿಗೂಢ ಲಕ್ಷಣಗಳನ್ನು ಗಮನಿಸಿ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪುಣೆ ಕಳುಹಿಸಲಾಯಿತು. ಆಗ ರೋಗಿಗೆ ಝೀಕಾ ವೈರಸ್ ತಗುಲಿರುವುದು ದೃಢಪಟ್ಟಿದೆ. ವರದಿಯನ್ನು ಶನಿವಾರ ಪಡೆಯಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ನೇಪಾಲ್ ಸಿಂಗ್ ತಿಳಿಸಿದ್ದಾರೆ.

ರೋಗಿಯೊಂದಿಗೆ ಸಂಪರ್ಕ ಹೊಂದಿದ ವ್ಯಕ್ತಿಗಳು ಮತ್ತು ಒಂದೇ ರೀತಿಯ ರೋಗಲಕ್ಷಣಗಳನ್ನು ಹೊಂದಿದ್ದ ಇಪ್ಪತ್ತೆರಡು ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ನಿಭಾಯಿಸಲು ಆರೋಗ್ಯ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇದಲ್ಲದೆ, ಜಿಲ್ಲೆಯಲ್ಲಿ ವೈರಸ್ ಹರಡಿರುವುದನ್ನು ಪರಿಶೀಲಿಸಲು ಹಲವಾರು ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು