ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಬೆದರಿಕೆ ಕರೆ; ಹಣಕ್ಕೆ ಬೇಡಿಕೆ ಇಟ್ಟ ಐವರ ಬಂಧನ

ನವದೆಹಲಿ: ಕೇಂದ್ರದ ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರಿಗೆ ಫೋನ್ ಕರೆಗಳ ಮೂಲಕ ಬೆದರಿಸಿ ಸುಲಿಗೆಗೆ ಯತ್ನಿಸಿದ್ದು, ದೆಹಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುಲಿಗೆ ಯತ್ನದ ಫೋನ್ ಕರೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಆರೋಪಿಗಳನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಕೋರಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟು ಸಚಿವರ ಕಚೇರಿಗೆ ಫೋನ್ ಕರೆಗಳು ಬಂದಿದ್ದು, ಆ ಬಗ್ಗೆ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದರು. ನವದೆಹಲಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ನೋಯ್ಡಾದಿಂದ ನಾಲ್ವರು ಮತ್ತು ದೆಹಲಿಯಿಂದ ಒಬ್ಬರ ಆರೋಪಿಯನ್ನು ಬಂಧಿಸಲಾಗಿದೆ.
Delhi Police seeks four days of police custody of the accused who made blackmailing calls to MoS Home Ajai Misra Teni.
— ANI (@ANI) December 24, 2021
ಅಕ್ಟೋಬರ್ 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದರು. ಆ ಪ್ರಕರಣದಲ್ಲಿ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಮಗನನ್ನು ಬಂಧಿಸಲಾಗಿದ್ದು, ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವಂತೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.