ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ರಸ್ತೆಯಲ್ಲಿ ನಗ್ನವಾಗಿ ಓಡಿದ ಮಹಿಳೆ– ಐವರ ವಿರುದ್ಧ ಪ್ರಕರಣ

Last Updated 22 ಸೆಪ್ಟೆಂಬರ್ 2022, 3:46 IST
ಅಕ್ಷರ ಗಾತ್ರ

ಮೊರಾದಾಬಾದ್(ಉತ್ತರ ಪ್ರದೇಶ): ಮಹಿಳೆಯೊಬ್ಬರ ಮೇಲೆ ಐವರು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಮಹಿಳೆ ರಸ್ತೆಯಲ್ಲಿ ನಗ್ನವಾಗಿ ಓಡುತ್ತಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಗಮನಿಸಿದ ಪೊಲೀಸರು, ಐವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಓಡುತ್ತಿರುವ 15 ಸೆಕೆಂಡುಗಳ ಸಿಸಿಟಿವಿ ವಿಡಿಯೊ ಬುಧವಾರ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಶೇರ್ ಆಗಿದೆ.

ಸೆಪ್ಟೆಂಬರ್ 1ರಂದು ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಕುಟುಂಬದವರ ದೂರಿನ ಆಧಾರದ ಮೇಲೆ ಒಬ್ಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ.

‘ಸೆಪ್ಟೆಂಬರ್ 1 ರ ರಾತ್ರಿ ಈ ಘಟನೆ ನಡೆದಿದೆ. ಒಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿಲ್ಲ. ತನಿಖೆ ಮುಂದುವರಿದಿದೆ’ ಎಂದು ಡಿಐಜಿ ಶಲಾಭ್ ಮಥೂರ್ ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ನೀಡಿರುವ ಹೇಳಿಕೆಯಲ್ಲೂ ಅತ್ಯಾಚಾರ ನಡೆದಿರುವುದನ್ನು ಸಂತ್ರಸ್ತೆ ಮತ್ತು ಅವರ ಕುಟುಂಬ ಸದಸ್ಯರು ತಳ್ಳಿ ಹಾಕಿದ್ದಾರೆ. ಸಂತ್ರಸ್ತೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಂತ್ರಸ್ತೆಯ ಸಂಬಂಧಿಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿ ನೌಶರ್ ಅಲಿ ಎಂಬುವವನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎಸ್‌ಪಿ ಮೀನಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT