ತೆಲಂಗಾಣ: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಲೈಂಗಿಕ ದೌರ್ಜನ್ಯ

ಹೈದರಾಬಾದ್: ತೆಲಂಗಾಣದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಐವರು ಸಹಪಾಠಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಹಯಾತ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಐವರು ವಿದ್ಯಾರ್ಥಿಗಳ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಬಂಧಿತರು ಸೆಕ್ಸ್ ವಿಡಿಯೊಗಳನ್ನು ವೀಕ್ಷಿಸುತ್ತಿದ್ದರು. ಇದರಿಂದ ಪ್ರಭಾವಿತರಾಗಿದ್ದ ಅವರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಾಟ್ಸ್‌ಆ್ಯಪ್‌ನಲ್ಲಿ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
Telangana | 5 students of standard 9th & 10th apprehended by police for sexually assaulting a 17-year-old girl, in Hayathnagar, Ranga Reddy dist, who happens to be their classmate. Accused used to watch porn videos & raped the girl,recorded the act & shared it on Whatsapp:Police
— ANI (@ANI) November 29, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.