ಶನಿವಾರ, ಮೇ 28, 2022
26 °C

ಆಂಧ್ರಪ್ರದೇಶ: ರೈಲು ಅಪಘಾತದಲ್ಲಿ ಐವರು ಪ್ರಯಾಣಿಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಕೊನಾರ್ಕ್‌ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. 

ಸಂತ್ರಸ್ತರು ಕೊಯಮತ್ತೂರು–ಸಿಲ್ಚಾರ್‌ ಎಕ್ಸ್‌ಪ್ರೆಸ್‌ ರೈಲಿನಿಂದ ಸಿಗಡಮ್‌–ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಓಡಲು ಪ್ರಯತ್ನಿಸಿದರು. ಆಗ ವೇಗವಾಗಿ ಬಂದ ಭುವನೇಶ್ವರ–ಮುಂಬೈ ಕೊನಾರ್ಕ್‌ ರೈಲಿಗೆ ಸಿಲುಕಿದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು. 

ವಿಶಾಖಪಟ್ಟಣ-ಪಲಾಸ ಮುಖ್ಯ ಮಾರ್ಗದ ಮಧ್ಯಭಾಗದಲ್ಲಿ ಘಟನೆ ನಡೆದಿದೆ. ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು