ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಡಬ್ಲ್ಯುಎಸ್‌ ಮೀಸಲು ಸಿಂಧುತ್ವ ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

Last Updated 30 ಆಗಸ್ಟ್ 2022, 19:31 IST
ಅಕ್ಷರ ಗಾತ್ರ

ನವದೆಹಲಿ:ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್‌) ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವುದು ಸಂವಿಧಾನ ಬದ್ಧವೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ಕೇಂದ್ರ ಸರ್ಕಾರವುಸಂವಿಧಾನಕ್ಕೆ 2019ರಲ್ಲಿ 103ನೇ ತಿದ್ದುಪಡಿ ತಂದಿತ್ತು. ಆ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿತ್ತು. ಇದು ಸಂವಿಧಾನಬಾಹಿರ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಎಂದು ಸುಪ್ರೀಂ ಕೋರ್ಟ್‌ಗೆಹಲವರು ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 1 ಕ್ಕೆ ಆರಂಭಿಸಲಾಗುವುದು.

ಜತೆಗೆ, ಮುಸ್ಲಿಮರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರು ಎಂದು ಪರಿಗಣಿಸಿ, ಅವರಿಗೆ ಮೀಸಲಾತಿ ನೀಡುವುದು ಸಂವಿಧಾನಬದ್ಧವೇ ಎಂಬುದನ್ನು ಪರಿಶೀಲಿಸುವುದಾಗಿ ಪೀಠವು ಹೇಳಿದೆ.ಆಂಧ್ರಪ್ರದೇಶ ಸರ್ಕಾರವು ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದೆ. ಅದನ್ನು ಅಲ್ಲಿನ ಹೈಕೋರ್ಟ್‌ ರದ್ದು ಮಾಡಿದೆ.

ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಇಡಬ್ಲ್ಯುಎಸ್‌ ಮೀಸಲಾತಿಗೆ ಸಂಬಂಧಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಿದ ನಂತರ ಈ ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಳ್ಳುತ್ತೇವೆ ಎಂದು ಪೀಠವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT