ಸೋಮವಾರ, ಸೆಪ್ಟೆಂಬರ್ 20, 2021
22 °C
ನಾಲ್ಕು ಪ್ರತ್ಯೇಕ ಘಟನೆ

ಮಧ್ಯಪ್ರದೇಶ: ಸಿಡಿಲು ಬಡಿದು ಐವರು ಸಾವು, 18 ಜನರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪನ್ನಾ, ಮಧ್ಯಪ್ರದೇಶ: ಪನ್ನಾ ಜಿಲ್ಲೆಯಲ್ಲಿ ಸಿಡಿಲು ಬಡಿದ ನಾಲ್ಕು ಪ್ರತ್ಯೇಕ ಘಟನೆಗಳಲ್ಲಿ ಐವರು ಮೃತಪಟ್ಟಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಉರೆಹಾ, ಪಿಪಾರಿಯಾ ದೌನ್, ಚೌಮುಖ ಹಾಗೂ ಸಿಮ್ರಾಖುರ್ದ್‌ ಗ್ರಾಮಗಳಲ್ಲಿ ಈ ಘಟನೆಗಳು ಸಂಭವಿಸಿವೆ ಎಂದು ಉಪವಿಭಾಗಾಧಿಕಾರಿ ರಚನಾ ಶರ್ಮಾ ಹೇಳಿದ್ದಾರೆ.

ಉರೆಹಾ, ಪಿಪಾರಿಯಾ ದೌನ್‌ ಹಾಗೂ ಚೌಮುಖ ಗ್ರಾಮಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸಿಮ್ರಾಖುರ್ದ್‌ನಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು