ಮಂಗಳವಾರ, ಜುಲೈ 27, 2021
21 °C

ಕೇರಳ: ಕಾರು–ಲಾರಿ ಡಿಕ್ಕಿಯಾಗಿ ಐದು ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಯಿಕ್ಕೋಡ್‌: ‘ಕೇರಳದ ಕೋಯಿಕ್ಕೋಡ್‌–ಪಾಲಕ್ಕಾಡ್‌ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಬೊಲೆರೊ ಕಾರು–ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಇದರಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

‘ರಾಮನಟ್ಟುಕರದ ಪುಲಿಂಜೋಡ್‌ ಬಳಿ ಬೆಳಿಗ್ಗೆ ಸುಮಾರು 4.45ಕ್ಕೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಣಿಸುತ್ತಿದ್ದ ಎಲ್ಲಾ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

‘ಮೃತರನ್ನು ಪಾಲಕ್ಕಾಡ್‌ ಮೂಲದ ನಜೀರ್‌, ಸುಬೇರ್‌, ಮೊಹಮ್ಮದ್‌ ಜಹೀರ್‌, ಅಸೈನಾರ್‌, ತಹೀರ್‌ ಎಂದು ಗುರುತಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಂತ್ರಸ್ತರು ಕರಿಪುರದ ಬಳಿಯಿರುವ ಕ್ಯಾಲಿಕಟ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಿಂತಿರುಗುತ್ತಿದ್ದರು. ಮೃತ ದೇಹಗಳನ್ನು ಕೋಯಿಕ್ಕೋಡ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಅವರು  ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು