ಮಂಗಳವಾರ, ಜೂನ್ 28, 2022
21 °C

ರಾಜಸ್ಥಾನ: ನವಜಾತ ಶಿಶು ಸೇರಿ ಐವರ ಮೃತದೇಹಗಳು ಬಾವಿಯಲ್ಲಿ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ (ಪಿಟಿಐ): ರಾಜಸ್ಥಾನದ ಜೈಪುರ ಜಿಲ್ಲೆಯ ದೂದು ಎಂಬ ಗ್ರಾಮದಲ್ಲಿ ನವಜಾತು ಶಿಶು ಸೇರಿದಂತೆ ಐವರು ಕುಟುಂಬ ಸದಸ್ಯರ ಮೃತದೇಹಗಳು ಶನಿವಾರ ಬಾವಿಯಲ್ಲಿ ಪತ್ತೆಯಾಗಿವೆ. ಇದೊಂದು ಆತ್ಮಹತ್ಯೆ ಪ್ರಕರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತರನ್ನು ಸೋದರಿಯರಾದ ಕಾಳಿದೇವಿ(27), ಮಮತಾ ಮೀನಾ(23), ಕಮಲೇಶ್ ಮೀನಾ(20) ಮತ್ತು ಹರ್ಷಿತ್(4) ಹಾಗೂ 20 ದಿನದ ಮಗು ಎಂದು ಗುರುತಿಸಲಾಗಿದೆ. ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಇಲ್ಲಿನ ಮೀನೊ ಕಾ ಮೊಹಲ್ಲಾದಲ್ಲಿ ವಾಸಿಸುತ್ತಿದ್ದ ಈ ಸಂತ್ರಸ್ತ ಕುಟುಂಬವು, ಮೇ 25ರಂದು ಮಾರುಕಟ್ಟೆಗೆ ಹೋಗುತ್ತಿರುವುದಾಗಿ ಹೇಳಿ ಹೋಗಿತ್ತು. ಆದರೆ, ಅದಾದ ಬಳಿಕ ಅವರು ಮನೆಗೆ ವಾಪಸಾಗಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು