ಸೋಮವಾರ, ಸೆಪ್ಟೆಂಬರ್ 20, 2021
23 °C

ಮಧ್ಯಪ್ರದೇಶ: 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ, ಐವರ ಬಂಧನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ 18 ವರ್ಷದೊಳಗಿನ ಇಬ್ಬರು ಬಾಲಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಮಹಿಳೆ ಭಾನುವಾರ ರಾತ್ರಿ ಸಿಂಗ್ರೌಲಿಯ ರೈಲು ನಿಲ್ದಾಣದ ಬಳಿ ಮನೆಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಪಾನಮತ್ತರಾಗಿದ್ದ ಯುವಕರ ಗುಂಪು ಆಕೆಯನ್ನು ಹಿಂಬಾಲಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಘಟನೆ ಬಳಿಕ ಸಂತ್ರಸ್ತ ಮಹಿಳೆ ಸಮೀಪದ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಮಧ್ಯಪ್ರದೇಶದಲ್ಲಿ 2017ರ ಜನವರಿಯಿಂದ 2021ರ ಜೂನ್‌ವರೆಗೆ 26,708 ಅತ್ಯಾಚಾರ ಪ್ರಕರಣಗಳು, 37 ಸಾಮೂಹಿಕ ಅತ್ಯಾಚಾರದ ನಂತರದ ಕೊಲೆ ಪ್ರಕರಣಗಳು ಮತ್ತು ಅಪ್ರಾಪ್ತ ಬಾಲಕಿಯರ ಅಪಹರಣದ 27,827 ಪ್ರಕರಣಗಳು ದಾಖಲಾಗಿವೆ ಎಂದು ಇತ್ತೀಚೆಗೆ ಅಲ್ಲಿನ ಸರ್ಕಾರ ತಿಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು