ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಮತ್ತೆ ಐವರಲ್ಲಿ ಝೀಕಾ ವೈರಸ್‌ ಪತ್ತೆ

Last Updated 15 ಜುಲೈ 2021, 6:54 IST
ಅಕ್ಷರ ಗಾತ್ರ

ತಿರುವನಂತರಪುರ: ಕೇರಳದಲ್ಲಿ ವ್ಯಾಪಕವಾಗುತ್ತಿರುವ ಝೀಕಾ ವೈರಸ್‌ ಸೋಂಕು ಮತ್ತೆ ಐವರಲ್ಲಿ ದೃಢಪಟ್ಟಿದೆ. ಇವರಲ್ಲಿ ನಾಲ್ವರು ಮಹಿಳೆಯರು. ಈ ಮೂಲಕ ರಾಜ್ಯದಲ್ಲಿ ಝೀಕಾ ಸೋಂಕಿತರ ಒಟ್ಟಾರೆ ಸಂಖ್ಯೆ 28ಕ್ಕೆ ಏರಿಕೆಯಾದಂತಾಗಿದೆ.

ಹೊಸ ಪ್ರಕರಣಗಳಲ್ಲಿ ಇಬ್ಬರು ಇಲ್ಲಿನ ಅನಾಯರಾ ಮೂಲದವರಾಗಿದ್ದು, ಮೂರು ಕಿ.ಮೀ ವ್ಯಾಪ್ತಿಯಲ್ಲಿಯೇ ರೋಗದ ಕ್ಲಸ್ಟರ್‌ ಅನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಗುರುವಾರ ತಿಳಿಸಿದ್ದಾರೆ.

ಇತರ ಸ್ಥಳಗಳಿಗೆ ಸೋಂಕು ಹರಡುವುದನ್ನು ತಡೆಯಲು ಈ ಪ್ರದೇಶದಲ್ಲಿ ಸೊಳ್ಳೆಗಳನ್ನು ನಾಶಪಡಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT