ಜಮ್ಮುವಿನ ಮನೆಯಲ್ಲಿ 6 ಮೃತದೇಹ ಪತ್ತೆ: ತನಿಖೆಗೆ ಎಸ್ಐಟಿ ರಚನೆ

ಜಮ್ಮು: ಇಲ್ಲಿನ ಸಿಧ್ರಾ ಪ್ರದೇಶದಲ್ಲಿರುವ ‘ತವಿ ವಿಹಾರ’ದಲ್ಲಿ ಮಂಗಳವಾರ ರಾತ್ರಿ ಒಟ್ಟು ಆರು ಮೃತದೇಹಗಳು ಪತ್ತೆಯಾಗಿವೆ. ‘ಇವರೆಲ್ಲಾ ವಿಷಪ್ರಾಸನದಿಂದ ಅಸುನೀಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಪ್ರಕರಣದ ತನಿಖೆಗಾಗಿ ಗ್ರಾಮಾಂತರ ವಿಭಾಗದ ಎಸ್ಪಿ ಸಂಜಯ್ ಶರ್ಮಾ ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ’ ಎಂದು ಜಮ್ಮು ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.