ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ: ಚುನಾವಣಾ ಕಣದಲ್ಲಿ ಏನೇನು ವಿಶೇಷ...

Last Updated 25 ಜನವರಿ 2022, 19:30 IST
ಅಕ್ಷರ ಗಾತ್ರ

*ಗೋವಾ ವಿಧಾನಸಭೆ ಚುನಾವಣೆಗೆ ಟಿಎಂಸಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಆರು ಜನರಿಗೆ ಸ್ಥಾನ ನೀಡಲಾಗಿದೆ. ಪಕ್ಷವು ಈವರೆಗೆ ಒಟ್ಟು 24 ಮಂದಿಯ ಟಿಕೆಟ್‌ಗಳನ್ನು ಕಾತರಿಪಡಿಸಿದೆ

*ಕಾಂಗ್ರೆಸ್‌ನ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ಮುಸ್ಲಿಮರ ಯೋಧ ಎಂದು ಬಿಂಬಿಸಿಕೊಂಡಿದ್ದ ಪಂಜಾಬ್‌ನ ಮಾಜಿ ಪೊಲೀಸ್ ಮಹಾ ನಿರ್ದೇಶಕ ಮೊಹಮ್ಮದ್ ಮುಸ್ತಫಾ ಅವರನ್ನು ಬಂಧಿಸಬೇಕು’ ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಆರೋಪವನ್ನು ಮುಸ್ತಫಾ ನಿರಾಕರಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ

* ಮಣಿಪುರ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿಯು ತನ್ನ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷವು ಈಗಿನ ಬಿಜೆಪಿ ಸರ್ಕಾರದಲ್ಲಿ ಮೈತ್ರಿಯಲ್ಲಿದೆ. ಆದರೆ ಈ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಕಣಕ್ಕೆ ಇಳಿದಿದೆ. ಇನ್ನೂ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ಪಕ್ಷವು ಹೇಳಿದೆ

* ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜ.27ರಂದು ಪಂಜಾಬ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ. ಪಕ್ಷದ 117 ಅಭ್ಯರ್ಥಿಗಳ ಜತೆಗೆ ಅವರುಅಮೃತಸರದ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಪಕ್ಷದ ಪ್ರಕಟಣೆ ಹೇಳಿದೆ

ಆಧಾರ: ಪಿಟಿಐ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT