ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ: ಶಾಲಾ ಬಸ್ ಅಪಘಾತ– ಐವರು ವಿದ್ಯಾರ್ಥಿನಿಯರ ಸಾವು

Last Updated 21 ಡಿಸೆಂಬರ್ 2022, 10:54 IST
ಅಕ್ಷರ ಗಾತ್ರ

ಇಂಫಾಲ್: ಮಣಿಪುರದ ನೊನೆಯ್ ಜಿಲ್ಲೆಯಲ್ಲಿ ಶಾಲಾ ಬಸ್ ಉರುಳಿಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರುಮೃತಪಟ್ಟು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಧಾನಿ ಇಂಫಾಲ್‌ನಿಂದ 50 ಕಿ.ಮೀ ದೂರದಲ್ಲಿರುವ ಲಾಂಗ್‌ಸಾಯಿ ಪ್ರದೇಶದ ಓಲ್ಡ್ ಕಚರ್ ರಸ್ತೆಯಲ್ಲಿ ಈ ಪಘಾತ ಸಂಭವಿಸಿದೆ.

ಥಂಬಲ್ನು ಪ್ರೌಢಶಾಲೆಯ ವಿದ್ಯಾರ್ಥಿಗಳು ವಾರ್ಷಿಕ ಶೈಕ್ಷಣಿಕ ಪ್ರವಾಸಕ್ಕಾಗಿ ಎರಡು ಬಸ್‌ಗಳಲ್ಲಿ ನೊನೆಯ್ ಜಿಲ್ಲೆಯ ಕೌಂಪುಮ್ ಪ್ರದೇಶಕ್ಕೆ ತೆರಳಿದ್ದರು. ಈ ಪೈಕಿ ವಿದ್ಯಾರ್ಥಿನಿಯರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಎಸ್‌ಡಿಆರ್‌ಎಫ್, ವೈದ್ಯಕೀಯ ತಂಡ ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತೆರಳಿ ರಕ್ಷಣಾ ತಂಡಕ್ಕೆ ಸಹಕರಿಸಿದ್ದಾರೆ. ಬಸ್‌ನಲ್ಲಿದ್ದ ಎಲ್ಲರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ’ಸಿಎಂ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಬಸ್ ಅಪಘಾತವಾಗಿರುವ ದೃಶ್ಯ ಮತ್ತು ಗಾಯಾಳುಗಳನ್ನು ಸಾಗಿಸುತ್ತಿರುವ ದೃಶ್ಯವಿರುವ ವಿಡಿಯೊವನ್ನು ಅವರು ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT