ಡಿಫು/ಹಫ್ಲಾಂಗ್: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಟ್ರಕ್‌ಗಳ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿ, ಬಳಿಕ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಲ್ಲಿ ಐವರು ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.

‘ದಿಯುಂಬ್ರಾ ಪ್ರದೇಶದಲ್ಲಿ ಗುರುವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ. ಖಾಸಗಿ ಸಿಮೆಂಟ್ ಕಂಪನಿಯೊಂದು ತನ್ನ ಐದು ಟ್ರಕ್‌ಗಳ ಮೂಲಕ ಕಲ್ಲಿದ್ದಲು ಸಾಗಿಸುತ್ತಿದ್ದ ವೇಳೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಟ್ರಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಅವರು ಹೇಳಿದರು.

ಈ ದಾಳಿಯನ್ನು ದಿಮುಸಾ ನ್ಯಾಷನಲ್ ಲಿಬರೇಷನ್ ಆರ್ಮಿಯ ಉಗ್ರರು ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

‘ಟ್ರಕ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಅದರಲ್ಲಿ ಸುಟ್ಟು ಕರಕಲಾದ ಐದು ದೇಹಗಳು ಸಿಕ್ಕಿವೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೃತಪಟ್ಟವರು ಟ್ರಕ್‌ನ ಚಾಲಕರು ಅಥವಾ ಕೆಲಸಗಾರರು ಆಗಿರಬಹುದು’ ಎಂದು ಪೊಲೀಸರು ಮಾಹಿತಿ ನೀಡಿದರು.

‘ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ದಾಳಿ ನಡೆಸುವ ಮುನ್ನ ಉಗ್ರರು ಸಿಮೆಂಟ್ ಕಂಪನಿ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಯೇ ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.