ಗುರುವಾರ , ಅಕ್ಟೋಬರ್ 28, 2021
18 °C

ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ: ವೈಮಾನಿಕ ಅಧಿಕಾರಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಪ್ರಾತಿನಿಧಿಕ ಚಿತ್ರ

ಕೊಯಮತ್ತೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ವೈಮಾನಿಕ ಅಧಿಕಾರಿಯೊಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯ 15 ದಿನದ ಹಿಂದೆ ನಡೆದಿತ್ತು.

ಅಧಿಕಾರಿಯನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಸದ್ಯ ಆರೋಪಿಯನ್ನು ತಿರುಪುರ್ ಜಿಲ್ಲೆಯ ಉದುಮಾಲ್‌ಪೇಟ್‌ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಯುಪಡೆಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯು ಮೂಲತಃ ಛತ್ತೀಸಗಡದವರು ಎಂದು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು