ಶನಿವಾರ, ಅಕ್ಟೋಬರ್ 8, 2022
21 °C

ತಮಿಳುನಾಡು: ಕಾವೇರಿ ನದಿ ತೀರದ ನಿವಾಸಿಗಳಿಗೆ ಪ್ರವಾಹದ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಯಿಮತ್ತೂರ್‌: ಸೇಲಂ ಜಿಲ್ಲೆಯ ಮೆಟ್ಟೂರು ಅಣೆಕಟ್ಟಿನ ಸ್ಟಾನ್ಲಿ ಜಲಾಶಯದಿಂದ ಹೆಚ್ಚುವರಿ ನೀರಿನ ಹೊರಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನದಿಯ ದಡದಲ್ಲಿ ವಾಸಿಸುವ ಜನರು, ವಿಶೇಷವಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಅಧಿಕಾರಿಗಳು ಮಂಗಳವಾರ ಸೂಚಿಸಿದ್ದಾರೆ. 

ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ, ಸೋಮವಾರ ರಾತ್ರಿ ಜಲಾಶಯದ ನೀರಿನ ಒಳಹರಿವು 65,000 ಕ್ಯೂಸೆಕ್‌ನಿಂದ 80,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಹೀಗಾಗಿ 16 ಗೇಟುಗಳ ಮೂಲಕ 1.20 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲು ಪಿಡಬ್ಲ್ಯುಡಿ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಆಸುಪಾಸಿನಲ್ಲಿ ವಾಸಿಸುತ್ತಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಲಹೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು