ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾದಲ್ಲಿ ಭಾರಿ ಮಳೆ: ಪ್ರವಾಹದ ಭೀತಿ, ನೂರಾರು ಮನೆಗಳು ಜಲಾವೃತ

Last Updated 23 ಜುಲೈ 2021, 7:06 IST
ಅಕ್ಷರ ಗಾತ್ರ

ಪಣಜಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಗೋವಾದ ಸತ್ತಾರಿ ಮತ್ತು ಬಿಚೊಲಿಂ ತಹಸೀಲ್‌ ಮತ್ತು ದಕ್ಷಿಣ ಗೋವಾದ ದರ್ಭಾಂದೋರಾ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.

ಭಾರಿ ಮಳೆಯ ಕಾರಣ ಮಹದಾಯಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸತ್ತಾರಿ ತಹಸೀಲ್‌ನಲ್ಲಿ ಗುರುವಾರ ರಾತ್ರಿಯಿಂದ ನೂರಕ್ಕೂ ಹೆಚ್ಚು ಮನೆಗಳಲ್ಲಿ ನೀರು ತುಂಬಿಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಆದರೆ, ಸದ್ಯದ ಮಳೆಯ ಪರಿಸ್ಥಿತಿಯನ್ನು ಗಮನಸಿದರೆ, ಪ್ರವಾಹ ಉಂಟಾಗುವ ಸಾಧ್ಯತೆ ಹೆಚಾಗಿದೆ. ಜಲಾವೃತಗೊಂಡಿರುವ ಮನೆಗಳಲ್ಲಿದ್ದ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸತ್ತಾರಿ ತಹಸೀಲ್‌ನ ವಲೊಪಿ ಪಟ್ಟಣದ ವೆಲುಸ್ ಹಳ್ಳಿಯ ಅರ್ಧ ಭಾಗ ನೀರಿನಲ್ಲಿ ಮುಳುಗಿದೆ. ಸುತ್ತಮುತ್ತಲಿನ ಹಳ್ಳಿಗಳ ನಡುವಿನ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆಗಳು ಮುಳುಗಿ ಹೋಗಿವೆ‘ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT