ಶನಿವಾರ, ಜನವರಿ 28, 2023
20 °C

ಉತ್ತರ ಭಾರತದಲ್ಲಿ ದಟ್ಟ ಮಂಜು: ರೈಲು ಸಂಚಾರ ವ್ಯತ್ಯಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರ ಭಾರತ ಮತ್ತು ದೇಶದ ಪೂರ್ವ ಭಾಗದಲ್ಲಿ ಭಾನುವಾರ ತೀವ್ರ ಚಳಿ ಹಾಗೂ ದಟ್ಟ ಮಂಜು ಮುಸುಕಿದ ವಾತಾವರಣವಿದ್ದ ಕಾರಣ ದೆಹಲಿ ಸೇರಿದಂತೆ ಹಲವೆಡೆ 480 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶವು 1.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಕ್ಕಿಂತಲೂ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

‘335 ರೈಲುಗಳ ಸಂಚಾರ ವಿಳಂಬವಾಗಿದೆ. 88 ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದು, 31 ರೈಲುಗಳು ಬದಲಿ ಮಾರ್ಗದಲ್ಲಿ ಸಂಚರಿಸಿವೆ. 33 ರೈಲುಗಳ ಸಂಚಾರವನ್ನು ಅರ್ಧಕ್ಕೆ ಕಡಿತಗೊಳಿಸಲಾಗಿದೆ’ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

25 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

(ಚಂಡೀಗಢ ವರದಿ): ಹರಿಯಾಣ ಮತ್ತು ಪಂಜಾಬ್‌ನಲ್ಲಿ ಶೀತಗಾಳಿ ಮುಂದುವರಿದಿದ್ದು, ಹಲವೆಡೆ ಕನಿಷ್ಠ ಉಷ್ಣಾಂಶವು ಸಾಮಾನ್ಯ ಮಿತಿಗಿಂತ ಕಡಿಮೆಯಾಗಿದೆ. ಕೆಲ ದಿನಗಳಿಂದ ಗರಿಷ್ಠ ಉಷ್ಣಾಂಶವೂ ಕುಸಿದಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹರಿಯಾಣದ ಹಿಸ್ಸಾರ್‌ನಲ್ಲಿ ಕನಿಷ್ಠ ಉಷ್ಣಾಂಶವು 1.4 ಡಿಗ್ರಿ ಸೆಲ್ಸಿಯಸ್‌ನಷ್ಟು, ಸಿರ್ಸಾದಲ್ಲಿ 3.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದೂ ಹೇಳಿದ್ದಾರೆ.

ಪಂಜಾಬ್‌ನ ಆದಂಪುರದಲ್ಲಿ 2.8 ಡಿಗ್ರಿ ಸೆಲ್ಸಿಯಸ್‌ ಹಾಗೂ ರೂಪ್‌ನಗರದಲ್ಲಿ 3.3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ ಎಂದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು