ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಿ ಸಮುದಾಯ ಪರಿಶಿಷ್ಟ ಪಂಗಡಕ್ಕೆ : ತೀರ್ಮಾನ ಕೈಗೊಳ್ಳದ ಕೇಂದ್ರ ಸರ್ಕಾರ

ಕಾಡುಗೊಲ್ಲ, ಕೋಲಿ ಸಮುದಾಯ ಪರಿಶಿಷ್ಟ ಪಂಗಡಕ್ಕೆ
Last Updated 14 ಫೆಬ್ರುವರಿ 2023, 20:21 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಕಾಡುಗೊಲ್ಲ (ಅಡವಿಗೊಲ್ಲ) ಹಾಗೂ ಕೋಲಿ ಸಮುದಾಯಗಳನ್ನು ಪರಿಶಿಷ್ಟ ಪಂಗಡದ (ಎಸ್‌ಟಿ) ಪಟ್ಟಿಗೆ ಇಲ್ಲಿ ಯವರೆಗೆ ಸೇರ್ಪಡೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.

ಹಾಸನದ ಸಂಸದ ‍ಪ್ರಜ್ವಲ್‌ ರೇವಣ್ಣ ಲೋಕಸಭೆಯಲ್ಲಿ ಕೇಳಿರುವ ಪ್ರಶ್ನೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಲಿಖಿತ ಉತ್ತರ ನೀಡಿದ್ದಾರೆ.

ಕಾಡುಗೊಲ್ಲರು ಹಾಗೂ ಹಟ್ಟಿ ಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕರ್ನಾಟಕ ಸರ್ಕಾರ 2015ರ ಆಗಸ್ಟ್‌ 17ರಂದು ಶಿಫಾರಸು ಮಾಡಿತ್ತು. ಅದೇ ರೀತಿ, ಗಂಗಾಮತ, ಕೋಲಿ ಸಮುದಾಯವನ್ನು ಪಟ್ಟಿಗೆ ಸೇರಿಸುವಂತೆ 2018ರ ಜುಲೈ 23ರಂದು ಶಿಫಾರಸು ಮಾಡಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಯಾವುದೇ ಸಮುದಾಯವನ್ನು ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವುದಕ್ಕೆ, ಕೈ ಬಿಡುವುದಕ್ಕೆ ಹಾಗೂ ಇತರ ಪರಿಷ್ಕರಣೆಗೆ ಕೇಂದ್ರ ಸರ್ಕಾರ 1999ರಲ್ಲೇ ಕಾರ್ಯವಿಧಾನ ರೂಪಿಸಿದೆ. ಇದರ ಪ್ರಕಾರ, ಯಾವುದೇ ಪ್ರಸ್ತಾವನೆಯನ್ನು ಸಂಬಂಧಿಸಿದ ರಾಜ್ಯ ಸರ್ಕಾರ ಸಲ್ಲಿಸಬೇಕು. ಇದಕ್ಕೆ ರಿಜಿಸ್ಟ್ರಾರ್‌ ಜನರಲ್‌ ಆಫ್‌ ಇಂಡಿಯಾ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಸಹಮತ ವ್ಯಕ್ತಪಡಿಸಬೇಕು. ಬಳಿಕ ಸರ್ಕಾರ ತೀರ್ಮಾನ ಕೈಗೊಳ್ಳು ತ್ತದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಈ ಹಿಂದೆ ಕೆಲವು ಸ್ಪಷ್ಟನೆಗಳನ್ನು ಕೇಳಿತ್ತು.

ಅದಕ್ಕೆ ಕರ್ನಾಟಕ ಸರ್ಕಾರ ಉತ್ತರ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT